ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. {ಸುನ್ನತಿಯು ಒಡಂಬಡಿಕೆಯ ಸಂಕೇತ} [PS] ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
2. ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. [PE][PS]
3. ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
4. “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
5. ಇನ್ನು ಮುಂದೆ ನಿನಗೆ [* ಮಹಾ ಪಿತೃ.] ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ [† ಅನೇಕ ಜನಾಂಗಗಳಿಗೆ ಮಹಾ ಪಿತೃ.] ಅಬ್ರಹಾಮ ಎಂದು ಹೆಸರಿರುವುದು.
6. ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
7. ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
8. ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. [PE][PS]
9. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
10. ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
11. ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
12. ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
14. ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು. [PE][PS]
15. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
16. ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. [PE][PS]
17. ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
18. ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. [PE][PS]
19. ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
20. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
21. ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
22. ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. [PE][PS]
23. ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
24. ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.
25. ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
26. ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
27. ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು. [PE]

Notes

No Verse Added

Total 50 Chapters, Current Chapter 17 of Total Chapters 50
ಆದಿಕಾಂಡ 17:31
1. {ಸುನ್ನತಿಯು ಒಡಂಬಡಿಕೆಯ ಸಂಕೇತ} PS ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
2. ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. PEPS
3. ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
4. “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
5. ಇನ್ನು ಮುಂದೆ ನಿನಗೆ * ಮಹಾ ಪಿತೃ. ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅನೇಕ ಜನಾಂಗಗಳಿಗೆ ಮಹಾ ಪಿತೃ. ಅಬ್ರಹಾಮ ಎಂದು ಹೆಸರಿರುವುದು.
6. ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
7. ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
8. ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. PEPS
9. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
10. ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
11. ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
12. ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
14. ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು. PEPS
15. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
16. ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. PEPS
17. ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
18. ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. PEPS
19. ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
20. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
21. ಆದರೆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
22. ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. PEPS
23. ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
24. ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.
25. ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
26. ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
27. ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು. PE
Total 50 Chapters, Current Chapter 17 of Total Chapters 50
×

Alert

×

kannada Letters Keypad References