1. {ಸೊದೋಮ್ ಗೊಮೋರ ಪಟ್ಟಣಗಳ ನಾಶನ} PS ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
|
2. “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
|
3. ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. PEPS
|
4. ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
|
5. ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
|
8. ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. PEPS
|
9. ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. PEPS
|
11. ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. PS
|
12. {ಲೋಟನನ್ನು ಸೊದೋಮಿನಿಂದ ಹೊರಬಂದದ್ದು} PS ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
|
13. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. PEPS
|
14. ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. PEPS
|
15. ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. PEPS
|
16. ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
|
17. ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. PEPS
|
19. ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
|
20. ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು. PEPS
|
21. ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
|
22. ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ * ಚಿಕ್ಕ ಊರು. ಚೋಗರ್ ಎಂದು ಹೆಸರಾಯಿತು. PEPS
|
25. ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
|
27. ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
|
28. ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು. PEPS
|
29. ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. PS
|
30. {ಲೋಟನು ಮತ್ತು ಅವನ ಹೆಣ್ಣುಮಕ್ಕಳು} PS ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
|
31. ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
|
32. ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. PEPS
|
33. ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. PEPS
|
34. ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
|
35. ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. PEPS
|
37. ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
|
38. ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. PE
|