3. ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
|
5. {ಏದೆನ್ ಉದ್ಯಾನವನವೂ ಪಾಪೋತ್ಪತ್ತಿಯೂ} PS ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
|
7. ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
|
8. ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. PEPS
|
9. ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. PEPS
|
10. ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
|
14. ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. PEPS
|
15. ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
|
16. ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
|
17. ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. PEPS
|
18. ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. PEPS
|
19. ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
|
20. ಹೀಗೆ ‡ ಮನುಷ್ಯನು ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. PEPS
|
21. ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
|
22. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
|
23. “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. PEPS |
24. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. PEPS
|