1. {ಇಸಾಕನ ಜನನ} PS ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
|
2. ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
|
7. ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. PEPS
|
9. {ಹಾಗರಳನ್ನು ಮತ್ತು ಇಷ್ಮಾಯೇಲನನ್ನು ಹೊರದೂಡಿದ್ದು} PS ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
|
10. ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. PEPS
|
12. ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
|
13. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. PEPS
|
14. ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. PEPS
|
16. ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ * ಅಥವಾ ಆ ಹುಡುಗನು ಅತ್ತನು. ಅತ್ತಳು. PEPS
|
17. ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
|
18. ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. PEPS
|
19. ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. PEPS
|
21. ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು. PS
|
22. {ಅಬ್ರಹಾಮನ ಮತ್ತು ಅಬೀಮೆಲೆಕನ ಒಪ್ಪಂದ} PS ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
|
23. ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. PEPS
|
25. ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
|
26. ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. PEPS
|
29. ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. PEPS
|
30. ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. PEPS
|
31. ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ † ಅಂದರೆ ಏಳು ಬಾವಿಗಳು ಅಥವಾ ಒಡಂಬಡಿಕೆಯ ಬಾವಿ. ಬೇರ್ಷೆಬ ಎಂದು ಹೆಸರಾಯಿತು. PEPS
|
32. ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
|
33. ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
|