ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. {ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು} (1ಪೂರ್ವ 1:32-33) [PS] ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
2. ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
3. ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
4. ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. [PE][PS]
5. ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
6. ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. [PS]
7. {ಅಬ್ರಹಾಮನ ಮರಣ ಮತ್ತು ಸಮಾಧಿ} [PS] ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
8. ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
9. ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
10. ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
11. ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು. [PS]
12. {ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು} [PS] ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. [PE][PS]
13. ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
14. ಮಿಷ್ಮಾ, ದೂಮಾ, ಮಸ್ಸಾ,
15. ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
16. ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. [PE][PS]
17. ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
18. ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ [* ಪೂರ್ವದಿಕ್ಕಿನಲ್ಲಿ ವಾಸಿಸಿದರು.] ಎದುರಾಗಿ ವಾಸಿಸಿದರು. [PS]
19. {ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು} [PS] ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
20. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. [PE][PS]
21. ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
22. ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. [PE][PS]
23. ಯೆಹೋವನು ಆಕೆಗೆ, [QBR] “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; [QBR] ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; [QBR] ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; [QBR] ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. [PE][PS]
24. ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
25. ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ [† ಮೈತುಂಬಾ ರೋಮವುಳ್ಳವನು.] ಏಸಾವ” ಎಂದು ಹೆಸರಿಟ್ಟರು.
26. ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. [PS]
27. {ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು} [PS] ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
28. ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. [PE][PS]
29. ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
30. ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. [PE][PS]
31. ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು. [PE][PS]
32. ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. [PE][PS]
33. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. [PE][PS]
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. [PE]

Notes

No Verse Added

Total 50 Chapters, Current Chapter 25 of Total Chapters 50
ಆದಿಕಾಂಡ 25:12
1. {ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು} (1ಪೂರ್ವ 1:32-33) PS ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
2. ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
3. ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
4. ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. PEPS
5. ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
6. ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. PS
7. {ಅಬ್ರಹಾಮನ ಮರಣ ಮತ್ತು ಸಮಾಧಿ} PS ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
8. ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
9. ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
10. ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
11. ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು. PS
12. {ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು} PS ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. PEPS
13. ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
14. ಮಿಷ್ಮಾ, ದೂಮಾ, ಮಸ್ಸಾ,
15. ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
16. ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. PEPS
17. ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
18. ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ * ಪೂರ್ವದಿಕ್ಕಿನಲ್ಲಿ ವಾಸಿಸಿದರು. ಎದುರಾಗಿ ವಾಸಿಸಿದರು. PS
19. {ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು} PS ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
20. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. PEPS
21. ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
22. ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. PEPS
23. ಯೆಹೋವನು ಆಕೆಗೆ,
“ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ;
ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು;
ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು;
ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. PEPS
24. ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
25. ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ ಮೈತುಂಬಾ ರೋಮವುಳ್ಳವನು. ಏಸಾವ” ಎಂದು ಹೆಸರಿಟ್ಟರು.
26. ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. PS
27. {ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು} PS ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
28. ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. PEPS
29. ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
30. ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. PEPS
31. ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು. PEPS
32. ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. PEPS
33. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. PEPS
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. PE
Total 50 Chapters, Current Chapter 25 of Total Chapters 50
×

Alert

×

kannada Letters Keypad References