1. {ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು} (1ಪೂರ್ವ 1:32-33) PS ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
|
4. ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. PEPS
|
6. ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. PS
|
9. ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
|
10. ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
|
11. ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು. PS
|
12. {ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು} PS ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. PEPS
|
13. ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
|
16. ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. PEPS
|
18. ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ * ಪೂರ್ವದಿಕ್ಕಿನಲ್ಲಿ ವಾಸಿಸಿದರು. ಎದುರಾಗಿ ವಾಸಿಸಿದರು. PS
|
20. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. PEPS
|
21. ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
|
22. ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. PEPS
|
23. ಯೆಹೋವನು ಆಕೆಗೆ,
“ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. PEPS |
25. ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ † ಮೈತುಂಬಾ ರೋಮವುಳ್ಳವನು. ಏಸಾವ” ಎಂದು ಹೆಸರಿಟ್ಟರು.
|
26. ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. PS
|
27. {ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು} PS ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
|
28. ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. PEPS
|
29. ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
|
30. ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. PEPS
|
33. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. PEPS
|
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. PE
|