1. {ಇಸಾಕನು ಗೆರಾರಿನಲ್ಲಿ} PS ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
|
2. ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
|
3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
|
4. ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
|
5. ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. PS
|
7. ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. PEPS
|
8. ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
|
9. ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು. PEPS
|
10. ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” PEPS
|
11. ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. PS
|
12. {ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು} PS ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
|
15. ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. PEPS
|
17. ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
|
18. ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. PEPS
|
20. ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ * ಅಂದರೆ ಜಗಳ. ಏಸೆಕ್” ಎಂದು ಹೆಸರಿಟ್ಟನು.
|
21. ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ † ಅಂದರೆ ವಿರೋಧಿಗಳಾವುದು. ಸಿಟ್ನಾ” ಎಂದು ಹೆಸರಿಟ್ಟನು.
|
22. ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ ‡ ಅಂದರೆ ವಿಶಾಲ ಸ್ಥಳ. ರೆಹೋಬೋತ್” ಎಂದು ಹೆಸರಿಟ್ಟನು. PS
|
24. ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು. PEPS
|
25. ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು. PEPS
|
26. ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. PEPS
|
27. ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,
|
28. “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
|
29. ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. PEPS
|
31. ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು. PEPS
|
32. ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
|
33. ಅವನು ಆ ಬಾವಿಗೆ “ § ಅಂದರೆ ಪ್ರಮಾಣ. ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು. PS
|
34. {ಏಸಾವನು ಹಿತ್ತಿಯರಲ್ಲಿ ಹೆಣ್ಣನ್ನು ಮದುವೆಯಾದದ್ದು} PS ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
|