2. ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
|
3. ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. PEPS
|
5. ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. PEPS
|
6. ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. PEPS
|
7. ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
|
8. ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು. PS
|
9. {ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು} PS ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
|
10. ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
|
12. “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. PEPS
|
13. ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
|
14. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
|
15. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. PEPS
|
18. ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
|
19. ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.
|
20. ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. PEPS
|
21. ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. PEPS
|
25. ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, PEPS
|
27. ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. PEPS
|
28. ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
|
30. ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. PS
|
31. {ಯಾಕೋಬನಿಗೆ ಮಕ್ಕಳು ಹುಟ್ಟಿದ್ದು} PS ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
|
32. ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” PEPS
|
33. ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” PEPS
|
34. ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು. PEPS
|
35. ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. PE
|