1. ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು. PEPS
|
2. ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು. PEPS
|
3. ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
|
6. ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು. PEPS
|
8. ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು. PEPS
|
9. ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
|
13. ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು. PEPS
|
14. ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ * ಈ ಹಣ್ಣುಗಳು ಸುವಾಸನೆಯುಳ್ಳವುಗಳು, ಕಾಮೋತ್ತೇಜಕವಾದವುಗಳು ಮತ್ತು ಸ್ತ್ರೀಯರಿಗೆ ಗರ್ಭಧರಿಸಲು ಉಪಯುಕ್ತವಾದವುಗಳು. ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು. PEPS
|
15. ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. PEPS
|
16. ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. PEPS
|
18. ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ † ಇಸ್ಸಾಕಾರ್ ಅಂದರೆ ಪ್ರತಿಫಲ. ಇಸ್ಸಾಕಾರ್” ಎಂದು ಹೆಸರಿಟ್ಟಳು. PEPS
|
20. ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ ‡ ಜೆಬುಲೂನ್ ಅಂದರೆ ಗೌರವ. ಜೆಬುಲೂನ್” ಎಂದು ಹೆಸರಿಟ್ಟಳು. PEPS
|
24. ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು. PS
|
25. {ಯಾಕೋಬನ ಮತ್ತು ಲಾಬಾನನ ಆಡುಕುರಿಗಳು} PS ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
|
27. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
|
29. ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
|
30. ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. PEPS
|
31. ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”
|
32. ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
|
33. ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು. PEPS
|
35. ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
|
36. ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು. PEPS
|
37. ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,
|
38. ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.
|
39. ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
|
40. ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
|
41. ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.
|
43. ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು. PE
|