1. {ಯಾಕೋಬನು ಲಾಬಾನನಿಂದ ಓಡಿ ಹೋದದ್ದು} PS “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
|
3. ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು. PEPS
|
4. ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ
|
5. ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.
|
7. ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
|
8. ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
|
10. “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
|
12. ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.
|
13. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’ ” ಎಂದು ಹೇಳಿದನು. PEPS
|
14. ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?
|
15. ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.
|
16. ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು. PEPS
|
18. ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು. PEPS
|
19. ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
|
21. ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. PS
|
22. {ಲಾಬಾನನ್ನು ಯಾಕೋಬನನ್ನು ಬೆನ್ನಟ್ಟಿದ್ದು} PS ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,
|
23. ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
|
24. ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು. PEPS
|
25. ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
|
26. ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
|
27. ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
|
28. ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.
|
29. ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
|
30. ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು. PEPS
|
31. ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.
|
32. ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ. PEPS
|
33. ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
|
34. ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. PEPS
|
35. ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು. PEPS
|
36. ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
|
37. ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. PEPS
|
38. “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.
|
39. ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.
|
40. ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
|
41. ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
|
42. ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು. PS
|
43. {ಯಾಕೋಬನಿಗೂ ಲಾಬಾನನಿಗೂ ಆದ ಒಪ್ಪಂದ} PS ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?
|
44. ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು. PEPS
|
46. ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
|
47. ಆ ಗುಡ್ಡೆಗೆ ಲಾಬಾನನು “ * ಯಗರಸಾಹದೂತ ಅಂದರೆ ಸಾಕ್ಷಿಯ ಗುಡ್ಡೆ. ಯಗರಸಾಹದೂತ” ಎಂದೂ ಯಾಕೋಬನು “ † ಗಲೇದ್ ಅಂದರೆ ಸಾಕ್ಷಿಯ ಗುಡ್ಡೆ. ಗಲೇದ್” ಎಂದೂ ಹೆಸರಿಟ್ಟರು. PEPS
|
48. ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.
|
49. ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ‡ ಮಿಚ್ಪಾ ಅಂದರೆ ಕಾವಲು ಗೋಪುರ ಅಥವಾ ಉನ್ನತ ಸ್ಥಳ. ಮಿಚ್ಪಾ ಎಂದು ಹೆಸರಾಯಿತು
|
50. ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು. PEPS
|
51. ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.
|
52. ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
|
53. ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
|
54. ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. PEPS
|
55. ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು. PE
|