2. ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ * ಮಹನಯಿಮ್ ಅಂದರೆ ಸುತ್ತವರೆದ ಸೈನ್ಯ. ಮಹನಯಿಮ್” ಎಂದು ಹೆಸರಿಟ್ಟನು. PEPS
|
3. ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
|
4. ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
|
5. ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’ ” ಎಂದು ಹೇಳಿರಿ ಅಂದನು. PEPS
|
6. ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ, PEPS
|
7. ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
|
9. ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
|
10. ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
|
11. ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
|
12. ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’ ” ಎಂದನು. PEPS
|
13. ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
|
15. ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
|
16. ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು. PEPS
|
17. ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’ ” ಎಂದು ಕೇಳಿದರೆ,
|
18. ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. PEPS
|
19. ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
|
20. ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
|
22. ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
|
25. ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
|
26. ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. PEPS
|
28. ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. PEPS
|
29. ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. PEPS
|
30. ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ † ಪೆನೀಯೇಲ್ ಅಂದರೆ ದೇವರ ಮುಖ. ಪೆನೀಯೇಲ್ ಎಂದು ಹೆಸರಿಟ್ಟನು, PEPS
|
31. ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
|
32. ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. PE
|