1. {ಯಾಕೋಬನು ಏಸಾವನನ್ನು ಸಂಧಿಸಿದ್ದು} PS ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
|
2. ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
|
3. ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು. PEPS
|
4. ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
|
5. ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು. PEPS
|
8. ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು. PEPS
|
10. ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
|
11. ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. PEPS
|
13. ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
|
14. ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು. PEPS
|
15. ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು. PEPS
|
17. ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು. PS
|
18. {ಯಾಕೋಬನು ಶೆಕೆಮ್ ಪಟ್ಟಣವನ್ನು ಸೇರಿದ್ದು} PS ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
|
19. ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
|
20. ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ * ದೇವರು, ಇಸ್ರಾಯೇಲರ ದೇವರು, ಶಕ್ತಿವಂತನಾದ ದೇವರು. ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು. PE
|