1. {ದೀನ ಮತ್ತು ಶೆಕೆಮಿನವರು} PS ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
|
3. ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
|
5. ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
|
7. ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು. PEPS
|
8. ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
|
9. ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
|
10. ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು. PEPS
|
11. ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
|
12. ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು. PEPS
|
13. ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
|
14. ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
|
15. ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
|
16. ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
|
17. ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು. PEPS
|
19. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
|
21. “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ. PEPS
|
22. “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
|
23. ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. PEPS
|
24. ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು. PS
|
25. {ದೀನಳ ಸಹೋದರರು ಪ್ರತಿಕಾರ ಮಾಡಿದ್ದು} PS ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
|
26. ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
|
27. ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
|
28. ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
|
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
|