1. {ಯಾಕೋಬನು ಬೇತೇಲಿಗೆ ಬಂದದ್ದು} PS ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. PEPS
|
2. ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
|
3. ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
|
4. ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
|
5. ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. PEPS
|
7. ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ * ಏಲ್ ಬೇತೇಲ್ ಅಂದರೆ ಬೇತೇಲಿನ ದೇವರು. ಏಲ್ ಬೇತೇಲ್ ಎಂದು ಹೆಸರಿಟ್ಟನು. PEPS
|
8. ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ † ಅಲ್ಲೋನ್ ಬಾಕೂತ್ ಅಂದರೆ ಅಳುವ ಮರ. ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. PS
|
9. {ದೇವರು ಯಾಕೋಬನಿಗೆ ಮಾಡಿದ ವಾಗ್ದಾನ} PS ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
|
10. ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. PEPS
|
11. ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
|
12. ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
|
14. ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
|
15. ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಬೆನ್ಯಾಮೀನ ಜನನ, ರಾಹೇಲಳ ಮರಣ PEPS
|
16. ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
|
17. ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
|
18. ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ ‡ ದುಃಖ ಪುತ್ರನು. ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ § ನನ್ನ ಬಲಗೈ ಪುತ್ರನು. ಬೆನ್ಯಾಮೀನ” ಎಂದು ಹೆಸರಿಟ್ಟನು. PEPS
|
20. ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ. PEPS
|
21. ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. (1ಪೂರ್ವ 2:1-2) PS
|
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು. PEPS
|
23. ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್. PEPS
|
26. ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ. PS
|
27. {ಇಸಾಕನ ಮರಣ} PS ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. PEPS
|
28. ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. PEPS
|