1. {ಯೋಸೇಫನು ಮತ್ತು ಪೋಟೀಫರನ ಹೆಂಡತಿ} PS ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
|
2. ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
|
4. ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
|
5. ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. PEPS
|
6. ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
|
8. ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
|
9. ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
|
10. ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ. PEPS
|
12. ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು. PEPS
|
14. ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.
|
15. ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು. PEPS
|
17. ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.
|
19. ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.
|
20. ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. PEPS
|
21. ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
|
22. ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
|
23. ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು. PE
|