1. {ಯಾಕೋಬನು ಯೋಸೇಫನ ಮಕ್ಕಳನ್ನು ಆಶೀರ್ವದಿಸಿದ್ದು} PS ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.
|
2. “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು. PEPS
|
4. ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’ ” ಎಂದು ಹೇಳಿದನು. PEPS
|
5. ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.
|
6. ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.
|
7. ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು. PEPS
|
9. ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.
|
10. ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. PEPS
|
11. ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು. PEPS
|
13. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.
|
14. ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು. PEPS
|
15. ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ,
“ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು, |
16. ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ
ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು. PEPS |
17. ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
|
19. ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
|
20. ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. PEPS
|
21. ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
|
22. ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು. PE
|