1. {ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ} PS ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
|
3. ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,
ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ. |
4. ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ.
ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು! |
6. ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು.
ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು. |
7. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು
ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು. |
8. ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು.
ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು. |
9. ಯೆಹೂದನು * ಅಥವಾ ಸಿಂಹಿಣಿ. ಪ್ರಾಯದ ಸಿಂಹದಂತಿದ್ದಾನೆ.
ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? |
10. † ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಅದು ಯಾರಿಗೆ ಸೇರಲ್ಪಟ್ಟದಾಗಿರುತ್ತದೇ? ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ.
ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು. |
11. ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು.
ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. |
12. ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು.
ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು. |
13. ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು.
ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು. |
14. ಇಸ್ಸಾಕಾರನು ‡ ದನಕುರಿಗಳ ಎರಡು ಮಂದೆ ಅಥವಾ ಹಿಂಡುಗಳ ನಡುವೆ. ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.
|
15. ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ
ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು. |
17. ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು
ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು. |
22. ಯೋಸೇಫನು ಫಲಭರಿತವಾದ ವೃಕ್ಷವು,
ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ. |
24. ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ,
ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ. |
25. ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ.
ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ. |
26. § ನಿನ್ನ ತಂದೆಯ ಆಶೀರ್ವಾದಗಳು ಸದಾಕಾಲವಾಗಿರುವ ಬೆಟ್ಟಗಳಿಗಿಂತ ಮಿಗಿಲಾಗಿದೆ. ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
|
27. “ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ.
ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು. |
28. ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು. PS
|
29. {ಯಾಕೋಬನ ಮರಣ ಮತ್ತು ಸಮಾಧಿ} PS ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
|
30. ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
|
31. ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
|
33. ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು. PE
|