1. {ಆದಾಮನ ವಂಶಾವಳಿ} (1ಪೂರ್ವ 1:1-4) PS ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
|
2. ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. PEPS
|
3. ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
|
16. ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. PEPS
|
22. ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
|
24. ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು. PEPS
|
26. ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
|
29. ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
|