2. ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
|
3. ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು. PEPS
|
4. ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
|
5. ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’ ” ಎಂದನು. PEPS
|
6. ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು. PEPS
|
7. ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
|
8. ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
|
10. ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
|
11. ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ * ಐಗುಪ್ತ್ಯರ ಶೋಕ. ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು. PEPS
|
13. ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು. PEPS
|
14. ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. PS
|
15. {ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು} PS ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
17. “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. PEPS
|
20. ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
|
21. ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು. PS
|
22. {ಯೋಸೇಫನ ಅಂತ್ಯ ದಿನಗಳು ಮತ್ತು ಮರಣ} PS ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
|
23. ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು. PEPS
|
24. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
|
25. ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು. PEPS
|
26. ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು. PE
|