1. {#1ಹಬಕ್ಕೂಕನ ದೂರು } [QS]ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ. [QE]
2. [QS]ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? [QE][QS]ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ. [QE]
3. [QS]ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? [QE][QS]ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ. [QE]
4. [QS]ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; [QE][QS]ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ. [QE]
5. {#1ದೇವರ ಉತ್ತರ } [QS]ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; [QE][QS]ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ. [QE]
6. [QS]ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ[* ಕಸ್ದೀಯ ಅಥವಾ ಬಾಬೆಲ್. ] ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; [QE][QS]ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು. [QE]
7. [QS]ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು. [QE]
8. [QS]ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; [QE][QS]ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. [QE]
9. [QS]ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. [QE][QS]ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು. [QE]
10. [QS]ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. [QE][QS]ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. [QE]
11. [QS]ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು. [QE]
12. {#1ಪ್ರವಾದಿಯ ಮತ್ತೊಂದು ಆಕ್ಷೇಪಣೆ } [QS]ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. [QE][QS]ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. [QE]
13. [QS]ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. [QE][QS]ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? [QE][QS]ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ? [QE]
14. [QS]ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ? [QE]
15. [QS]ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? [QE]
16. [QS]ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; [QE][QS]ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ. [QE]
17. [QS]ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? [QE]