1. {#1ದೇವರ ಉತ್ತರ } [QS]ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. [QE][QS]ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು [QE][QS]ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು. [QE]
2. [QS]ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, [QE][QS]“ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು! [QE]
3. [QS]ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. [QE][QS]ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು. [QE]
4. [QS]ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. [QE]
5. [QS]ಅಲ್ಲದೆ ಮದ್ಯಪಾನವು[* ಮದ್ಯಪಾನವು ದ್ರಾಕ್ಷಾರಸವು ಅಥವಾ ಐಶ್ವರ್ಯ. ] ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, [QE][QS]ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. [QE][QS]ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. [QE]
6. {#1ಕಸ್ದೀಯರ ಅಪರಾಧಗಳ ಖಂಡನೆ } [PS]“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. [PE][QS]‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’ [QE]
7. [QS]ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು. [QE]
8. [QS]ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, [QE][QS]ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು. [QE]
9. [QS]‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, [QE][QS2]ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ; [QE]
2. [QS2]ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ. [QE]
2. [QS2]ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’ [QE]
12. [QS]‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ! [QE]
2. [QS2]ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ. [QE]
2. [QS2]ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’ [QE]
15. [QS]‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, [QE][QS2]ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ! [QE]
2. [QS2]ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, [QE][QS2]ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು. [QE]
2. [QS2]ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; [QE][QS2]ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. [QE][QS2]ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು. [QE]
18. [QS]ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; [QE][QS]ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’ [QE]
19. [QS]‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? [QE][QS]ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ. [QE]
20. [QS]ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.” [QE]