1. {#1ಹಬಕ್ಕೂಕನ ಪ್ರಾರ್ಥನೆ }
2. [PS]ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. [PE][QS]ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; [QE][QS]ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; [QE][QS]ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ. [QE]
3. [QS]ತೇಮಾನಿನಿಂದ[* ತೇಮಾನಿನಿಂದ ತೇಮಾನ್ ಎದೋಮ್ ದೇಶದ ಜಿಲ್ಲೆಯಾಗಿದ್ದು, ಯೆಹೂದದ ದಕ್ಷಿಣ ಭಾಗದ ಕಡೆಯಲ್ಲಿತ್ತು. ] ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ [† ಪಾರಾನ್ ಪರ್ವತದಿಂದ ಪಾರಾನ್ ಪರ್ವತವು ಬಂಜರು/ಬರಡು ಸ್ಥಳವಾಗಿತ್ತು, ಅದು ಸೀನಾಯಿ ಗಡಿಪ್ರದೇಶ/ಭೂಪ್ರದೇಶದಲ್ಲಿ ಇತ್ತು. ] ಬರುತ್ತಾನೆ; [QE][QSS]ಸೆಲಾ.[QSE] [QS]ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, [QE][QS]ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ; [QE]
4. [QS]ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ. [QE]
5. [QS]ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ. [QE]
6. [QS]ಆತನು ನಿಂತುಕೊಳ್ಳಲು ಭೂಮಿಯು ಅಳೆದನು.[‡ ಅಳೆದನು. ಕಂಪಿಸುವಂತೆ ಮಾಡಿದನು ಅಥವಾ ಅಲುಗಾಡಿಸಿದನು. ] ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; [QE][QS]ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು. [QE]
7. [QS]ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ. [QE]
8. [QS]ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? [QE][QS]ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು! [QE]
9. [QS]ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. [QE][QSS]ಸೆಲಾ.[QSE]
10. [QS]ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; [QE][QS]ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; [QE][QS]ಸಾಗರವು ಆರ್ಭಟಿಸಿ ಅಲೆಗಳನ್ನು[§ ಅಲೆಗಳನ್ನು ಅಥವಾ ಕೈಗಳನ್ನು. ] ಮೇಲಕ್ಕೆ ಎತ್ತುತ್ತದೆ. [QE]
11. [QS]ಹಾರಿ ಬರುವ ನಿನ್ನ ಹಾರುವ ಬಾಣಗಳ ಬೆಳಕಿಗೆ, [QE][QS]ಥಳಥಳಿಸುವ ನಿನ್ನ ಮಿಂಚುವ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ. [QE]
12. [QS]ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ. [QE]
13. [QS]ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; [QE][QS]ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. [QE][QSS]ಸೆಲಾ.[QSE]
14. [QS]ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು [QE][QS]ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು[* ತಲೆಯನ್ನು ಅಥವಾ ಸೇನಾಧಿಪತಿಯನ್ನು. ] ಅವನ ದೊಣ್ಣೆಗಳಿಂದಲೇ ಒಡೆದಿದ್ದೀ [QE]
15. [QS]ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ. [QE]
16. {#1ಪ್ರವಾದಿಯ ಭಯವೂ ಭರವಸವೂ } [QS]ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. [QE][QS]ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು. [QE]
17. [QS]ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, [QE][QS]ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, [QE][QS2]ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, [QE]
18. [QS]ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು. [QE]
19. [QS]ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, [QE][QS]ಬೆಟ್ಟ ಗುಡ್ಡಗಳನ್ನು ಚುರುಕಾಗಿ ಓಡಲು ನನ್ನನ್ನು ಸಮರ್ಥನನ್ನಾಗಿಸುತ್ತಾನೆ. [QE][PS]ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; [PE][QS3]ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.[QE]