1. {ಮೋಶೆಗಿಂತ ಯೇಸು ಶ್ರೇಷ್ಠನು} PS ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ * ಎಫೆ 4:1; ಫಿಲಿ. 3:14; 2 ತಿಮೊ. 1:9: ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ † ಯೋಹಾ 20:21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. PEPS
|
2. ‡ ಅರಣ್ಯ 12:7; ಇಬ್ರಿ. 5:5: ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
|
3. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
|
5. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ * ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3: ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ † ಧರ್ಮೋ 18:15,18,19: ಸಾಕ್ಷಿಕೊಟ್ಟಿದ್ದಾನೇ.
|
6. ಆದರೆ ಕ್ರಿಸ್ತನಾದರೋ ‡ ಇಬ್ರಿ. 1:2: ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, § ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ * 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ನಾವೇ ದೇವರ ಮನೆಯಾಗಿರುತ್ತೇವೆ. PS
|
7. {ದೇವರು ಮಕ್ಕಳಿಗಿರುವ ವಿಶ್ರಾಂತಿ} PS ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
“ † ಕೀರ್ತ 95:7-11; ಇಬ್ರಿ. 3:15: ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, |
8. ‡ ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. |
9. ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ,
§ ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. |
10. ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು,
‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. |
11. ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು
* ಇಬ್ರಿ. 4:3,5: ಕೋಪಗೊಂಡು ಪ್ರಮಾಣಮಾಡಿದೆನು.’ ” PEPS |
12. ಸಹೋದರರೇ, † ಮತ್ತಾ 16:16; 2 ಕೊರಿ 3:3; 1 ತಿಮೊ. 4:10: ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
|
13. ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ‡ ಯೆಶಾ 44:20; ರೋಮಾ. 7:11; ಎಫೆ 4:22: ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
|
14. ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು § ಇಬ್ರಿ. 3:6; 10:23; 1 ಕೊರಿ 15:2: ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ * ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
|
15. “ † ಕೀರ್ತ 95:7-11; ಇಬ್ರಿ. 3:7; 4:7: ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ,
ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” PEPS |
16. ‡ ಅರಣ್ಯ 14:2,23,24,30; ಧರ್ಮೋ 1:34-38: ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
|
17. ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? § ಅರಣ್ಯ 14:29; 1 ಕೊರಿ 10:5: ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
|
18. ನನ್ನ ವಿಶ್ರಾಂತಿಯಲ್ಲಿ * ಧರ್ಮೋ 1:34,35; ಇಬ್ರಿ. 4:2: ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
|
19. † ಇಬ್ರಿ. 4:6; ಕೀರ್ತ 78:21; 106:24 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. PE
|