1. {#1ಮೋಶೆಗಿಂತ ಯೇಸು ಶ್ರೇಷ್ಠನು }
4. [PS]ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ [* ಎಫೆ 4:1; ಫಿಲಿ. 3:14; 2 ತಿಮೊ. 1:9: ]ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ [† ಯೋಹಾ 20:21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ]ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. [PE][PS] [‡ ಅರಣ್ಯ 12:7; ಇಬ್ರಿ. 5:5: ]ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
3. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
4. ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ [§ ಎಫೆ 2:10; 3:9: ]ಸಮಸ್ತವನ್ನು ಕಟ್ಟಿದಾತನು ದೇವರೇ.
5. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ [* ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3: ]ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ [† ಧರ್ಮೋ 18:15,18,19: ]ಸಾಕ್ಷಿಕೊಟ್ಟಿದ್ದಾನೇ.
6. ಆದರೆ ಕ್ರಿಸ್ತನಾದರೋ [‡ ಇಬ್ರಿ. 1:2: ]ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, [§ ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ]ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ [* 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ]ನಾವೇ ದೇವರ ಮನೆಯಾಗಿರುತ್ತೇವೆ. [PE]
7. {#1ದೇವರು ಮಕ್ಕಳಿಗಿರುವ ವಿಶ್ರಾಂತಿ } [PS]ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, [PE][QS]“[† ಕೀರ್ತ 95:7-11; ಇಬ್ರಿ. 3:15: ]ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, [QE]
2. [QS2] [‡ ವಿಮೋ 17:7: ]ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ [QE][QS2]ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. [QE]
9. [QS]ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, [QE][QS2][§ ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ]ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. [QE]
10. [QS]ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, [QE][QS2]‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, [QE][QS2]ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. [QE]
11. [QS]ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು [QE][QS2][* ಇಬ್ರಿ. 4:3,5: ]ಕೋಪಗೊಂಡು ಪ್ರಮಾಣಮಾಡಿದೆನು.’ ” [QE]
12. [PS]ಸಹೋದರರೇ, [† ಮತ್ತಾ 16:16; 2 ಕೊರಿ 3:3; 1 ತಿಮೊ. 4:10: ]ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
13. ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ [‡ ಯೆಶಾ 44:20; ರೋಮಾ. 7:11; ಎಫೆ 4:22: ]ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
14. ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು [§ ಇಬ್ರಿ. 3:6; 10:23; 1 ಕೊರಿ 15:2: ]ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ [* ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ]ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. [PE]
15. [QS]“[† ಕೀರ್ತ 95:7-11; ಇಬ್ರಿ. 3:7; 4:7: ]ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, [QE][QS2]ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, [QE][QS2]ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” [QE]
16. [PS] [‡ ಅರಣ್ಯ 14:2,23,24,30; ಧರ್ಮೋ 1:34-38: ]ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
17. ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? [§ ಅರಣ್ಯ 14:29; 1 ಕೊರಿ 10:5: ]ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
18. ನನ್ನ ವಿಶ್ರಾಂತಿಯಲ್ಲಿ [* ಧರ್ಮೋ 1:34,35; ಇಬ್ರಿ. 4:2: ]ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
19. [† ಇಬ್ರಿ. 4:6; ಕೀರ್ತ 78:21; 106:24 ]ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. [PE]