1. {ಯೇಸು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ಲೇವಿವಂಶದ ಯಾಜಕರಿಗಿಂತಲೂ ಶ್ರೇಷ್ಠನು} PS * ಆದಿ 14:17-20: ಈ ಮೆಲ್ಕಿಜೆದೇಕನು † ಆದಿ 33:18; ಕೀರ್ತ 76:2: ಸಾಲೇಮಿನ ಅರಸನೂ ‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7: ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
|
2. ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
|
3. ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. § ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6: ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, * ಕೀರ್ತ 110:4: ನಿರಂತರವಾಗಿ ಯಾಜಕನಾಗಿರುವನು.
|
4. ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. † ಅ. ಕೃ. 7:8,9: ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
|
5. ನಿಜವಾಗಿಯೂ ‡ ಅರಣ್ಯ 18:21,26; 2 ಪೂರ್ವ 31:4,5: ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
|
6. ಆದರೆ ಮೆಲ್ಕಿಜೆದೇಕನು ಲೇವಿಯ § ವ. 3: ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ * ರೋಮಾ. 4:13: ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.
|
8. ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು † ಇಬ್ರಿ. 5:6; 6:20; ಲೂಕ 24:5: ಚಿರಂಜೀವಿಯಾಗಿರುವನು.
|
10. ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. PEPS
|
11. ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ‡ ಇಬ್ರಿ. 7:18,19; 8:7; ಗಲಾ. 2:21: ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
|
13. ಆದರೆ § ಎಂದರೆ ಕೀರ್ತ 110:4: ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
|
14. * ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5: ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
|
15. (15-16) ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.
|
16. ಆತನ ವಿಷಯದಲ್ಲಿ † ಕೀರ್ತ 110:4; ಇಬ್ರಿ. 5:6; 7:21: “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.
|
17. ಯಾಕೆಂದರೆ ಮೊದಲಿದ್ದ ಆಜ್ಞೆಯು ‡ ರೋಮಾ. 8:3; ಗಲಾ. 4:9: ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
|
18. § ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39: ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ * ಇಬ್ರಿ. 6:18: ಉತ್ತಮವಾದ ಹೊಸ † ವ. 25; ಇಬ್ರಿ. 4:16: ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
|
20. ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ
‡ ವ. 17: “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. |
24. ಆದಕಾರಣ ಆತನು † ವ. 19; ಯೋಹಾ 14:6: ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ‡ ಇಬ್ರಿ. 9:24; ರೋಮಾ. 8:34: ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. PEPS
|
25. ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು § ಕೀರ್ತ 16:10; ಪ್ರಕ 15:4; 16:5: ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, * ಇಬ್ರಿ. 4:15: ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, † ಇಬ್ರಿ. 8:1; 4:14: ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
|
26. ‡ ಇಬ್ರಿ. 5:3: ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು § ಇಬ್ರಿ. 9:12,28; 10:10: ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
|
27. ಧರ್ಮಶಾಸ್ತ್ರವು * ಇಬ್ರಿ. 5:2: ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ † ಇಬ್ರಿ. 2:10; 5:9: ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. PE
|