1. {#1ಹೋಶೇಯನ ಪತ್ನಿಯ ಪತಿದ್ರೋಹ }
2. [PS]ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು. [PE]{#1ಹೋಶೇಯನ ಮದುವೆ ಮತ್ತು ಮೂವರು ಮಕ್ಕಳು ಜನಿಸಿದ್ದು } [QS]ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. [QE][QS]ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು. [QE]
3. [QS]ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು. [QE]
4. [QS]ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್[* ಇಜ್ರೇಲ್ ಅಂದರೆ ದೇವರು ಬಿತ್ತುತ್ತಾನೆ. ಈ ಇಜ್ರೇಲ್ ಪಟ್ಟಣದಲ್ಲಿ ಯೇಹು ಇಸ್ರಾಯೇಲಿನ ಅರಸನನ್ನು ಮತ್ತು ಅವನ ಎಲ್ಲಾ ರಾಜಮನೆತನದ ಜನರನ್ನು ಕೊಂದುಹಾಕಿದನು ಮತ್ತು ಹೊಸ ಆಡಳಿತದ ಮೊದಲ ಅರಸನಾದನು. 2 ಅರಸು. 9-10 ಅಧ್ಯಾಯಗಳನ್ನು ನೋಡಿರಿ. ] ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು. [QE]
5. [QS]ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು. [QE]
6. [QS]ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ[† ಲೋ ರುಹಾಮ ವಾತ್ಸಲ್ಯರಹಿತ. ]’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ. [QE]
7. [QS]ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು. [QE]
8. [QS]ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು. [QE]
9. [QS]ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ[‡ ಲೋ ಅಮ್ಮಿ ನನ್ನ ಪ್ರಜೆಗಳಲ್ಲ. ]’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು. [QE]
10. {#1ಇಸ್ರಾಯೇಲಿನ ಮುಂದಿನ ಸುಸ್ಥಿತಿ } [QS]ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. [QE][QS]ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. [QE]
11. [QS]ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು[§ ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು ದೇವರು ತನ್ನ ಜನರನ್ನು ಪುನಃ ನೆಡುವನು. ]. [QE]