ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಹೋಶೇ
1. {#1ಹೋಶೇಯನು ಇಸ್ರಾಯೇಲರಿಗೆ ನೀಡಿದ ಎಚ್ಚರಿಕೆ } [QS]ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; [QE][QS]ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; [QE][QS]ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ. [QE]
2. [QS]ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. [QE][QS]ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು. [QE]
3. [QS]“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. [QE][QS]ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು. [QE]
4. [QS]ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; [QE][QS]ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ. [QE]
5. [QS]ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. [QE][QS]ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; [QE][QS]ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು. [QE]
6. [QS]ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. [QE][QS]ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ[* ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ಮಾಡಿಕೊಂಡ ಮರದ ವಿಗ್ರಹಗಳಿಗಾಗಿ. ] ನಾಚಿಕೆಪಡುವುದು. [QE]
7. [QS]ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ. [QE]
8. [QS]ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. [QE][QS]ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; [QE][QS]ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು. [QE]
9. [QS]ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; [QE][QS]ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?. [QE]
10. [QS]ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; [QE][QS]ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು. [QE]
11. [QS]ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; [QE][QS]ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, [QE][QS]ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು. [QE]
12. [QS]ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, [QE][QS]ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; [QE][QS]ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ. [QE]
13. [QS]ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ [QE][QS]ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ. [QE]
14. [QS]ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. [QE][QS]ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. [QE][QS]ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು. [QE]
15. [QS]ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; [QE][QS]ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು. [QE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 14
1 2 3 4 5 6 7 8 9 10 11 12 13 14
ಹೋಶೇಯನು ಇಸ್ರಾಯೇಲರಿಗೆ ನೀಡಿದ ಎಚ್ಚರಿಕೆ 1 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ. 2 ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು. 3 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು. 4 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ. 5 ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು. 6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ* ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ಮಾಡಿಕೊಂಡ ಮರದ ವಿಗ್ರಹಗಳಿಗಾಗಿ. ನಾಚಿಕೆಪಡುವುದು. 7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ. 8 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು. 9 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?. 10 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು. 11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು. 12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ. 13 ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ. 14 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು. 15 ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References