1. {#1ದೇವರ ಪುತ್ರವಾತ್ಸಲ್ಯ } [QS]ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು. [QE]
2. [QS]ನಾನು[* ನಾನು ಅಥವಾ ಅವರು. ] ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. [QE][QS]ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು. [QE]
3. [QS]ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. [QE][QS]ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ. [QE]
4. [QS]ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. [QE][QS]ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, [QE][QS]ಅವರಿಗೆ ಆಹಾರವನ್ನು ಉಣಿಸಿದೆನು. [QE]
5. [QS]ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; [QE][QS]ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು. [QE]
6. [QS]ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, [QE][QS]ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು. [QE]
7. [QS]ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; [QE][QS]ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ. [QE]
8. [QS]ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! [QE][QS]ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! [QE][QS]ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು. [QE]
9. [QS]ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. [QE][QS]ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ[† ನಿನ್ನ ಬಳಿಗೆ ಪಟ್ಟಣಗಳಿಗೆ ವಿರುದ್ಧವಾಗಿ. ] ರೋಷದಿಂದ ಬಾರೆನು. [QE]
10. [QS]ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; [QE][QS]ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು; [QE]
11. [QS]ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; [QE][QS]ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. [QE]
12. {#1ಇಸ್ರಾಯೇಲರ ಪಾಪ } [QS]ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; [QE][QS]ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ. [QE]