1. [QS]ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. [QE][QS]ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; [QE][QS]ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ. [QE]
2. [QS]ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, [QE][QS]ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, [QE][QS]ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು. [QE]
3. [QS] [* ಆದಿ 25:26. ]ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, [QE][QS]ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು [† ದೇವರೊಂದಿಗೆ ಹೋರಾಡಿದನು ಆದಿ 32:24-26. ]; [QE]
4. [QS]ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. [QE][QS]ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ[‡ ಅವನೊಡನೆ ನಮ್ಮೊಡನೆ ] ಮಾತನಾಡಿದನು. [QE]
5. [QS]ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ. [QE]
6. [QS]ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; [QE][QS]ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. [QE]
7. [QS]ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. [QE]
8. [QS]ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; [QE][QS]ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ? [QE]
9. [QS]ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; [QE][QS]ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು. [QE]
10. [QS]ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. [QE][QS]ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ. [QE]
11. [QS]ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; [QE][QS]ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? [QE][QS]ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು. [QE]
12. [QS]ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; [QE][QS]ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು. [QE]
13. [QS]ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; [QE][QS]ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು. [QE]
14. [QS]ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, [QE][QS]ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, [QE][QS]ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು. [QE]