ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಹೋಶೇ
1. ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. [QBR] ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; [QBR] ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ. [QBR]
2. ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, [QBR] ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, [QBR] ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು. [QBR]
3. [* ಆದಿ 25:26.] ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, [QBR] ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು [† ದೇವರೊಂದಿಗೆ ಹೋರಾಡಿದನು ಆದಿ 32:24-26.] ; [QBR]
4. ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. [QBR] ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ [‡ ಅವನೊಡನೆ ನಮ್ಮೊಡನೆ] ಮಾತನಾಡಿದನು. [QBR]
5. ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ. [QBR]
6. ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; [QBR] ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. [QBR]
7. ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. [QBR]
8. ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; [QBR] ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ? [QBR]
9. ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; [QBR] ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು. [QBR]
10. ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. [QBR] ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ. [QBR]
11. ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; [QBR] ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? [QBR] ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು. [QBR]
12. ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; [QBR] ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು. [QBR]
13. ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; [QBR] ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು. [QBR]
14. ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, [QBR] ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, [QBR] ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
ಹೋಶೇ 12:8
1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ. 2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು. 3 * ಆದಿ 25:26. ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು ದೇವರೊಂದಿಗೆ ಹೋರಾಡಿದನು ಆದಿ 32:24-26. ; 4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಅವನೊಡನೆ ನಮ್ಮೊಡನೆ ಮಾತನಾಡಿದನು. 5 ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ. 6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. 7 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. 8 ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ? 9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು. 10 ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ. 11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು. 12 ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು. 13 ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು. 14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
Common Bible Languages
West Indian Languages
×

Alert

×

kannada Letters Keypad References