1. {ಇಸ್ರಾಯೇಲಿಗೆ ಸಂಭವಿಸಬೇಕಾದ ನಾಶನ} [PS] ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, [QBR] ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; [QBR] ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು. [QBR]
2. ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, [QBR] ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; [QBR] ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, [QBR] ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ. [QBR]
3. ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, [QBR] ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, [QBR] ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, [QBR] ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು. [QBR]
4. ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; [QBR] ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. [QBR]
5. ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ. [QBR]
6. ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; [* ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ನಾನು ಅವರನ್ನು ಪೋಷಿಸಿದಾಗ ಅವರು ತೃಪ್ತರಾದರು.] [QBR] ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು. [QBR]
7. ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು. [QBR]
8. ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; [QBR] ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು. [QBR]
9. ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು [† ಯಾರು ನಿನ್ನ ಸಹಾಯವು ನನ್ನೊಂದಿಗೆ ಮಾತ್ರವಿದೆ. ] ನಿನ್ನನ್ನು ರಕ್ಷಿಸುವರು? [‡ ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದುದರಿಂದ ನಾಶವಾಗಿದ್ದಿ.] [QBR]
10. ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? [QBR] ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; [QBR] ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ? [QBR]
11. ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; [QBR] ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ. [QBR]
12. ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ. [QBR]
13. ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; [QBR] ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ. [QBR]
14. ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? [QBR] ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? [QBR] ಕನಿಕರವು ನನಗೆ ಕಾಣಿಸದು. [QBR]
15. ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, [QBR] ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. [QBR] ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು. [QBR]
16. ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; [QBR] ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. [QBR] ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು. [PE]