ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಹೋಶೇ
1. {#1ದೇವರ ಪ್ರೀತಿಪೂರ್ವಕವಾದ ವಾಗ್ದಾನಗಳು } [QS]ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; [QE][QS]ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ. [QE]
2. [QS]ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು [QE][QS]ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; [QE][QS]ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.[* ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು. ] [QE]
3. [QS]ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, [QE][QS]ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, [QE][QS]ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; [QE][QS]ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ. [QE]
4. [QS]ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; [QE][QS]ನನ್ನ ಕೋಪವು ಅವರಿಂದ ತೊಲಗಿಹೋಯಿತು. [QE]
5. [QS]ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; [QE][QS]ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು. [QE]
6. [QS]ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, [QE][QS]ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು. [QE]
7. [QS]ಅದರ ನೆರಳನ್ನು ಆಶ್ರಯಿಸಿರುವವರು[† ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು. ] ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; [QE][QS]ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. [QE]
8. [QS]ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; [QE][QS]ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; [QE][QS]ನನ್ನಿಂದಲೇ ನೀನು ಫಲಿಸುವಿ. [QE]
9. [QS]ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. [QE][QS]ಯೆಹೋವನ ಮಾರ್ಗಗಳು ಸತ್ಯವಾದವುಗಳು; [QE][QS]ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.[QE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
ದೇವರ ಪ್ರೀತಿಪೂರ್ವಕವಾದ ವಾಗ್ದಾನಗಳು 1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ. 2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.* ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು. 3 ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ. 4 ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು. 5 ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು. 6 ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು. 7 ಅದರ ನೆರಳನ್ನು ಆಶ್ರಯಿಸಿರುವವರು ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು. ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. 8 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ. 9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References