1. {#1ಹೋಶೇಯನು ತನ್ನ ಪತ್ನಿಯನ್ನು ಮರಳಿ ಕರೆತಂದದ್ದು } [PS]ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು[* ದೀಪದ್ರಾಕ್ಷೆಯ ಅಡೆಗಳನ್ನು ಪುರಾತನ ಮಧ್ಯ ಪ್ರಾಚ್ಯದಲ್ಲಿ, ಜನರು ಒಣಗಿದ ದ್ರಾಕ್ಷಿಯಿಂದ ಮಾಡಿದ ಅಡೆಗಳನ್ನು ಅರ್ಪಿಸುತ್ತಿದ್ದರು ಮತ್ತು ದೇವರುಗಳು ಎಂದು ಕರೆಯಲ್ಪಡುವ ಅವುಗಳನ್ನು ಪೂಜಿಸುವವರಿಗೆ ದೊಡ್ಡ ಸುಗ್ಗಿಯನ್ನು ಕೊಡುತ್ತವೆ ಎಂದು ಜನರು ನಂಬುತ್ತಿದ್ದರು. ] ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.
2. ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ[† ಹದಿನೈದು ಬೆಳ್ಳಿ ನಾಣ್ಯಗಳನ್ನೂ 170 ಗ್ರಾಂ ಬೆಳ್ಳಿ. ] ಮತ್ತು ಒಂದುವರೆ ಹೋಮೆರ್ [‡ ಒಂದುವರೆ ಹೋಮೆರ್ 150 ಗ್ರಾಂ. ] ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.
3. ನಾನು ಅವಳಿಗೆ, “ನನಗಾಗಿ ಬಹು ದಿನಗಳು ತಾಳಿಕೊಂಡಿರು; ವ್ಯಭಿಚಾರ ಮಾಡಬೇಡ, ಯಾರೊಂದಿಗೂ ವ್ಯಭಿಚಾರಮಾಡಬೇಡ. ನಾನು ಸಹ ನಿನ್ನವನೇ, ನಿನ್ನ ಸಂಗಡ ವಾಸಿಸುವೆನು” ಎಂದು ಹೇಳಿದೆನು. [PE]
4. [PS]ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.
5. ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು. [PE]