1. {#1ಯಾಜಕ, ಪ್ರಭು ಮತ್ತು ಪ್ರಜೆಗಳ ದುರಾಚಾರ } [QS]ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; [QE][QS]ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. [QE][QS]ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ. [QE]
2. [QS]ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; [QE][QS]ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ. [QE]
3. [QS]ಹೀಗಿರಲು ದೇಶವು ನರಳುವುದು, [QE][QS]ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; [QE][QS]ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು. [QE]
4. [QS]ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; [QE][QS]ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ. [QE]
5. [QS]ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; [QE][QS]ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. [QE]
6. [QS]ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; [QE][QS]ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. [QE][QS]ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು. [QE]
7. [QS]ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; [QE][QS]ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು. [QE]
8. [QS]ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. [QE]
9. [QS]ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, [QE][QS]ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. [QE]
10. [QS]ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; [QE][QS]ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ. [QE]
11. [QS]ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ. [QE]
12. [QS]ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. [QE][QS]ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ. [QE]
13. [QS]ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. [QE][QS]ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. [QE][QS]ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, [QE][QS]ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ? [QE]
14. [QS]ವ್ಯಭಿಚಾರಿಣಿಯರಾಗಿ[* ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಈ ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು. ] ನಡೆಯುವ ನಿಮ್ಮ ಕುಮಾರಿಯರನ್ನೂ [QE][QS]ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; [QE][QS]ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; [QE][QS]ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; [QE][QS]ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. [QE]
15. [QS]ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. [QE][QS]ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, [QE][QS]“ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು. [QE]
16. [QS]ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; [QE][QS]ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ? [QE]
17. [QS]ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. [QE]
18. [QS]ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; [QE][QS]ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ. [QE]
19. [QS]ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; [QE][QS]ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು. [QE]