ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಹೋಶೇ
1. ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; [QBR] ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. [QBR] ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ. [QBR]
2. ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; [QBR] ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ. [QBR]
3. ಹೀಗಿರಲು ದೇಶವು ನರಳುವುದು, [QBR] ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; [QBR] ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು. [QBR]
4. ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; [QBR] ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ. [QBR]
5. ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; [QBR] ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. [QBR]
6. ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; [QBR] ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. [QBR] ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು. [QBR]
7. ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; [QBR] ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು. [QBR]
8. ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. [QBR]
9. ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, [QBR] ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. [QBR]
10. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; [QBR] ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ. [QBR]
11. ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ. [QBR]
12. ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. [QBR] ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ. [QBR]
13. ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. [QBR] ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. [QBR] ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, [QBR] ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ? [QBR]
14. ವ್ಯಭಿಚಾರಿಣಿಯರಾಗಿ [* ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಈ ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು.] ನಡೆಯುವ ನಿಮ್ಮ ಕುಮಾರಿಯರನ್ನೂ [QBR] ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; [QBR] ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; [QBR] ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; [QBR] ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. [QBR]
15. ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. [QBR] ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, [QBR] “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು. [QBR]
16. ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; [QBR] ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ? [QBR]
17. ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. [QBR]
18. ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; [QBR] ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ. [QBR]
19. ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; [QBR] ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು. [PE]

ಟಿಪ್ಪಣಿಗಳು

No Verse Added

ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 14
1 2 3 4 5 6 7 8 9 10 11 12 13 14
ಹೋಶೇ 4:8
1 ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ. 2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ. 3 ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು. 4 ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ. 5 ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. 6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು. 7 ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು. 8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. 9 ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. 10 ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ. 11 ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ. 12 ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ. 13 ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ? 14 ವ್ಯಭಿಚಾರಿಣಿಯರಾಗಿ * ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಈ ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು. ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. 15 ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು. 16 ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ? 17 ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. 18 ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ. 19 ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 14
1 2 3 4 5 6 7 8 9 10 11 12 13 14
Common Bible Languages
West Indian Languages
×

Alert

×

kannada Letters Keypad References