1. {#1ಪಶ್ಚಾತ್ತಾಪ ಪಡದ ಇಸ್ರಾಯೇಲರು } [QS]ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; [QE][QS]ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; [QE][QS]ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. [QE]
2. [QS]ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; [QE][QS]ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. [QE]
3. [QS]ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, [QE][QS]ಆತನ ಆಗಮನವು ಉದಯದಂತೆ ನಿಶ್ಚಯ; [QE][QS]ಆತನು ಮುಂಗಾರಿನಂತೆಯೂ, [QE][QS]ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. [QE]
4. [QS]ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? [QE][QS]ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? [QE][QS]ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ. [QE]
5. [QS]ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, [QE][QS]ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; [QE][QS]ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು. [QE]
6. [QS]ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ. [QE]
7. {#1ಇಸ್ರಾಯೇಲರ ದುರ್ನಡತೆಗಳು } [QS]ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ. [QE]
8. [QS]ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ. [QE]
9. [QS]ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, [QE][QS]ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; [QE][QS]ಹೌದು, ಘೋರಕೃತ್ಯವನ್ನು ನಡೆಸುತ್ತಾರೆ. [QE]
10. [QS]ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; [QE][QS]ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ. [QE]
11. [QS]ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ. [QE]