1. ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
2. {ದೈವದ್ರೋಹಿಯಾದ ಜನಾಂಗ} [PS] ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. [QBR] ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. [QBR]
3. ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. [QBR] ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ. [QBR]
4. ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, [QBR] ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. [QBR] ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. [QBR] ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. [QBR]
5. ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? [QBR] ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. [QBR]
6. ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, [QBR] ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. [QBR] ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ. [QBR]
7. ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. [QBR] ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. [QBR] ಅದು ಅನ್ಯಜನರಿಂದ ಹಾಳಾಯಿತು. [QBR]
8. ಯೆರೂಸಲೇಮಿನ ನಗರವೊಂದೇ [* ಯೆರೂಸಲೇಮಿನ ನಗರವೊಂದೇ ಅಥವಾ ಚೀಯೋನ್ ಕುಮಾರ್ತೆಯರು.] ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, [QBR] ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. [QBR]
9. ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, [QBR] ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. [PE][PS]
10. ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. [QBR] ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. [QBR]
11. ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? [QBR] ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. [QBR] ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. [QBR]
12. ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; [QBR] ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? [QBR]
13. ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; [QBR] ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. [QBR]
14. ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; [QBR] ಇವು ನನಗೆ ಭಾರ; ಸಹಿಸಲು ಬೇಸರ. [QBR]
15. ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. [QBR] ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. [QBR] ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. [QBR]
16. ನಿಮ್ಮನ್ನು ತೊಳೆದು ಶುದ್ಧರಾಗಿ, [QBR] ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, [QBR] ದುರಾಚಾರವನ್ನು ಬಿಡಿ, [QBR]
17. ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. [QBR] ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. [QBR] ಅನಾಥನಿಗೆ ನ್ಯಾಯತೀರಿಸಿರಿ. [QBR] ವಿಧವೆಯ ಪಕ್ಷವಾಗಿ ವಾದಿಸಿರಿ.” [PE][PS]
18. “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. [QBR] “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. [QBR] ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. [QBR]
19. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. [QBR]
20. ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” [QBR] ಈ ಮಾತನ್ನು ಯೆಹೋವನೇ ನುಡಿದಿದ್ದಾನೆ. [PS]
21. {ಅಪನಂಬಿಗಸ್ತ ಯೆರೂಸಲೇಮ್} [PS] ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! [QBR] ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ [QBR] ಈಗ ಕೊಲೆಪಾತಕರಿಗೆ ನೆಲೆಯಾಗಿದೆ. [QBR]
22. ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. [QBR]
23. ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; [QBR] ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; [QBR] ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು. [QBR]
24. ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, [QBR] “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು. [QBR]
25. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, [QBR] ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು. [QBR]
26. ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. [QBR] ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.” [QBR]
27. ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು. [QBR]
28. ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. [QBR]
29. “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. [QBR] ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. [QBR]
30. ಎಲೆ ಒಣಗಿದ ಏಲಾ ಮರದಂತೆಯೂ, [QBR] ನೀರಿಲ್ಲದ ವನದ ಹಾಗೂ ಇರುವಿರಿ. [QBR]
31. ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, [QBR] ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.” [PE]