1.
2. [PS]ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. [PE]{#1ದೈವದ್ರೋಹಿಯಾದ ಜನಾಂಗ } [QS]ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. [QE][QS]ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. [QE]
3. [QS]ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. [QE][QS]ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ. [QE]
4. [QS]ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, [QE][QS]ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. [QE][QS]ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. [QE][QS]ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. [QE]
5. [QS]ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? [QE][QS]ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. [QE]
6. [QS]ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, [QE][QS]ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. [QE][QS]ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ. [QE]
7. [QS]ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. [QE][QS]ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. [QE][QS]ಅದು ಅನ್ಯಜನರಿಂದ ಹಾಳಾಯಿತು. [QE]
8. [QS]ಯೆರೂಸಲೇಮಿನ ನಗರವೊಂದೇ[* ಯೆರೂಸಲೇಮಿನ ನಗರವೊಂದೇ ಅಥವಾ ಚೀಯೋನ್ ಕುಮಾರ್ತೆಯರು. ] ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, [QE][QS]ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. [QE]
9. [QS]ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, [QE][QS]ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. [QE]
10. [PS]ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. [PE][QS]ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. [QE]
11. [QS]ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? [QE][QS]ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. [QE][QS]ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. [QE]
12. [QS]ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; [QE][QS]ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? [QE]
13. [QS]ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; [QE][QS]ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. [QE]
14. [QS]ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; [QE][QS]ಇವು ನನಗೆ ಭಾರ; ಸಹಿಸಲು ಬೇಸರ. [QE]
15. [QS]ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. [QE][QS]ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. [QE][QS]ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. [QE]
16. [QS]ನಿಮ್ಮನ್ನು ತೊಳೆದು ಶುದ್ಧರಾಗಿ, [QE][QS]ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, [QE][QS]ದುರಾಚಾರವನ್ನು ಬಿಡಿ, [QE]
17. [QS]ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. [QE][QS]ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. [QE][QS]ಅನಾಥನಿಗೆ ನ್ಯಾಯತೀರಿಸಿರಿ. [QE][QS]ವಿಧವೆಯ ಪಕ್ಷವಾಗಿ ವಾದಿಸಿರಿ.” [QE]
18. [PS]“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. [PE][QS]“ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. [QE][QS]ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. [QE]
19. [QS]ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. [QE]
20. [QS]ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” [QE][QS]ಈ ಮಾತನ್ನು ಯೆಹೋವನೇ ನುಡಿದಿದ್ದಾನೆ. [QE]
21. {#1ಅಪನಂಬಿಗಸ್ತ ಯೆರೂಸಲೇಮ್ } [PS]ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! [PE][QS]ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ [QE][QS]ಈಗ ಕೊಲೆಪಾತಕರಿಗೆ ನೆಲೆಯಾಗಿದೆ. [QE]
22. [QS]ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. [QE]
23. [QS]ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; [QE][QS]ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; [QE][QS]ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು. [QE]
24. [QS]ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, [QE][QS]“ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು. [QE]
25. [QS]ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, [QE][QS]ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು. [QE]
26. [QS]ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. [QE][QS]ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.” [QE]
27. [QS]ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು. [QE]
28. [QS]ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. [QE]
29. [QS]“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. [QE][QS]ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. [QE]
30. [QS]ಎಲೆ ಒಣಗಿದ ಏಲಾ ಮರದಂತೆಯೂ, [QE][QS]ನೀರಿಲ್ಲದ ವನದ ಹಾಗೂ ಇರುವಿರಿ. [QE]
31. [QS]ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, [QE][QS]ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.” [QE]