1. {#1ಇಷಯನ ಬೇರಿನಿಂದ ಕೊಂಬೆ }
2. [PS]ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. [PE][PS]ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, [PE][QS]ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು. [QE]
3. [QS]ಆತನು ಯೆಹೋವನ ಭಯದಲ್ಲಿ ಆನಂದಿಸುವನು. [QE][QS]ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. [QE]
4. [QS]ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. [QE][QS]ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು. [QE]
5. [QS]ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. [QE]
6. [QS]ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. [QE][QS]ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು. [QE]
7. [QS]ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. [QE][QS]ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು. [QE]
8. [QS]ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; [QE][QS]ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು. [QE]
9. [QS]ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; [QE][QS]ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. [QE]
10. [QS]ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; [QE][QS]ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು. [QE]
11. [QS]ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು [QE][QS]ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, [QE][QS]ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ[* ಸಮುದ್ರದ ಕರಾವಳಿ ದ್ವೀಪಗಳಿಂದಲೂ ಅಂದರೆ ಪ್ರಾರಂಭ ಪ್ರಾಚೀನ ಕಾಲದಲ್ಲಿ ದೂರವಿರುವ ದೇಶಗಳು ಎಂದರ್ಥ. ] ಉಳಿದವರನ್ನು ಬರಮಾಡಿಕೊಳ್ಳುವನು. [QE]
12. [QS]ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, [QE][QS]ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು. [QE]
13. [QS]ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. [QE][QS]ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ. [QE]
14. [QS]ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. [QE][QS]ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು. [QE]
15. [QS]ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, [QE][QS]ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು. [QE]
16. [QS]ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, [QE][QS]ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು. [QE]