ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ
1. {#1ಯೆಹೋವನ ಸ್ತೋತ್ರಗೀತೆಗಳು } [PS]ಆ ದಿನದಲ್ಲಿ ನೀನು ಹೇಳುವುದೇನೆಂದರೆ, [PE][QS]“ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. [QE]
2. [QS]ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; [QE][QS]ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” [QE]
3. [QS]ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. [QE]
4. [QS]ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, [QE][QS]ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. [QE]
5. [QS]ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. [QE]
6. [QS]ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. [QE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
ಯೆಹೋವನ ಸ್ತೋತ್ರಗೀತೆಗಳು 1 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
×

Alert

×

Kannada Letters Keypad References