ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ
1. {ಯೆಹೋವನ ಸ್ತೋತ್ರಗೀತೆಗಳು} [PS] ಆ ದಿನದಲ್ಲಿ ನೀನು ಹೇಳುವುದೇನೆಂದರೆ, [QBR] “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. [QBR]
2. ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; [QBR] ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” [QBR]
3. ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. [QBR]
4. ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, [QBR] ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. [QBR]
5. ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. [QBR]
6. ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. [PE]

ಟಿಪ್ಪಣಿಗಳು

No Verse Added

ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
ಯೆಶಾಯ 12:11
ಯೆಹೋವನ ಸ್ತೋತ್ರಗೀತೆಗಳು 1 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
Common Bible Languages
West Indian Languages
×

Alert

×

kannada Letters Keypad References