ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {ಯೆಹೋವನ ಸ್ತೋತ್ರಗೀತೆಗಳು} [PS] ಆ ದಿನದಲ್ಲಿ ನೀನು ಹೇಳುವುದೇನೆಂದರೆ, [QBR] “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. [QBR]
2. ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; [QBR] ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” [QBR]
3. ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. [QBR]
4. ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, [QBR] ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. [QBR]
5. ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. [QBR]
6. ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. [PE]

Notes

No Verse Added

Total 66 Chapters, Current Chapter 12 of Total Chapters 66
ಯೆಶಾಯ 12:5
1. {ಯೆಹೋವನ ಸ್ತೋತ್ರಗೀತೆಗಳು} PS ದಿನದಲ್ಲಿ ನೀನು ಹೇಳುವುದೇನೆಂದರೆ,
“ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
2. ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;
ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
3. ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
4. ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
5. ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6. ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. PE
Total 66 Chapters, Current Chapter 12 of Total Chapters 66
×

Alert

×

kannada Letters Keypad References