1. {ಬಾಬೆಲಿನ ವಿಷಯವಾದ ದೈವೋಕ್ತಿ} [PS] ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ. [QBR]
2. ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, [QBR] ಅವರನ್ನು ಕೈಬೀಸಿ ಕರೆಯಿರಿ. [QBR]
3. ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. [QBR] ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ. [QBR]
4. ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! [QBR] ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! [QBR] ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ. [QBR]
5. ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, [QBR] ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. [QBR]
6. ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. [QBR]
7. ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. [QBR]
8. ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. [QBR] ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. [QBR]
9. ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, [QBR] ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. [QBR]
10. ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. [QBR] ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. [PE][PS]
11. ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, [QBR] ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. [QBR]
12. ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. [QBR]
13. ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ [QBR] ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, [QBR] ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು. [QBR]
14. ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ [* ಇಲ್ಲದಂಥ ಅಥವಾ ಕುರುಬನಿಲ್ಲದಂಥ.] ಕುರಿಗಳಂತೆಯೂ [QBR] ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. [QBR]
15. ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು. [QBR]
16. ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. [QBR] ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು. [QBR]
17. ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. [QBR] ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು. [QBR]
18. ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. [QBR] ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ. [QBR]
19. ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, [QBR] ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು. [QBR]
20. ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; [QBR] ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು. [QBR]
21. ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. [QBR] ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು. [QBR]
22. ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ. [PE]