1. {#1ಬಾಬೆಲಿನ ವಿಷಯವಾದ ದೈವೋಕ್ತಿ }
2. [PS]ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ. [PE][QS]ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, [QE][QS]ಅವರನ್ನು ಕೈಬೀಸಿ ಕರೆಯಿರಿ. [QE]
3. [QS]ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. [QE][QS]ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ. [QE]
4. [QS]ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! [QE][QS]ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! [QE][QS]ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ. [QE]
5. [QS]ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, [QE][QS]ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. [QE]
6. [QS]ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. [QE]
7. [QS]ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. [QE]
8. [QS]ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. [QE][QS]ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. [QE]
9. [QS]ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, [QE][QS]ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. [QE]
10. [QS]ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. [QE][QS]ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. [QE]
11. [PS]ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, [PE][QS]ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. [QE]
12. [QS]ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. [QE]
13. [QS]ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ [QE][QS]ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, [QE][QS]ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು. [QE]
14. [QS]ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ[* ಇಲ್ಲದಂಥ ಅಥವಾ ಕುರುಬನಿಲ್ಲದಂಥ. ] ಕುರಿಗಳಂತೆಯೂ [QE][QS]ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. [QE]
15. [QS]ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು. [QE]
16. [QS]ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. [QE][QS]ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು. [QE]
17. [QS]ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. [QE][QS]ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು. [QE]
18. [QS]ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. [QE][QS]ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ. [QE]
19. [QS]ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, [QE][QS]ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು. [QE]
20. [QS]ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; [QE][QS]ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು. [QE]
21. [QS]ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. [QE][QS]ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು. [QE]
22. [QS]ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ. [QE]