1. [QS]ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು [QE][QS]ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ. [QE]
2. [QS]ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, [QE][QS]ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು. [QE]
3. [QS]ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. [QE][QS]ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ. [QE]
4. [QS]ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. [QE][QS]ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, [QE][QS]ನಾಶನವು ನಿಂತುಹೋಗುವುದು. [QE][QS]ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು. [QE]
5. [QS]ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. [QE][QS]ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು. [QE]
6. [QS]ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. [QE][QS]ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ. [QE]
7. [QS]ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. [QE][QS]ನೀವು ಕೀರ್ ಹರೆಷೆಥಿನ ಜನರ[* ಕೀರ್ ಹರೆಷೆಥಿನ ಜನರ ಅಥವಾ ಕೀರ್ ಹರೆಷೆಥಿನ ಜನರ ಒಣದ್ರಾಕ್ಷಿ. ] ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ. [QE]
8. [QS]ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. [QE][QS]ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, [QE][QS]ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, [QE][QS]ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ. [QE]
9. [QS]ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. [QE][QS]ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. [QE][QS]ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ. [QE]
10. [QS]ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. [QE][QS]ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ. [QE]
11. [QS]ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ. [QE]
12. [QS]ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು [QE][QS]ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ. [QE]
13. [PS]ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.
14. ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ. [PE]