1. {#1ದಮಸ್ಕದ ವಿಷಯವಾದ ದೈವೋಕ್ತಿ } [PS]ದಮಸ್ಕದ ವಿಷಯವಾದ ದೈವೋಕ್ತಿ. [PE][QS]“ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು. [QE]
2. [QS]ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. [QE][QS]ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು. [QE]
3. [QS]ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. [QE][QS]ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. [QE]
4. [QS]“ಆ ದಿನದಲ್ಲಿ, [QE][QS]ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು. [QE]
5. [QS]ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. [QE][QS]ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು. [QE]
6. [QS]ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, [QE][QS]ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ. [QE]
7. [MS] ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. [ME]
8.
9. [PS]ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ. [PE][QS]ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, [QE][QS]ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು. [QE]
10. [QS]ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. [QE][QS]ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ. [QE]
11. [QS]ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. [QE][QS]ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ. [QE]
12. {#1ಅಶ್ಶೂರದ ವಿಷಯವಾದ ದೈವೋಕ್ತಿ } [QS]ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! [QE][QS]ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! [QE]
13. [QS]ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. [QE][QS]ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು. [QE]
14. [QS]ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. [QE][QS]ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. [QE]