1. {#1ಕೂಷಿನ ವಿಷಯವಾದ ದೈವೋಕ್ತಿ } [QS]ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು, [QE]
2. [QS]ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, [QE][QS]ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, [QE][QS]ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, [QE][QS]ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ. [QE]
3. [QS]ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, [QE][QS]ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ! [QE]
4. [QS]ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, [QE][QS]ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ. [QE]
5. [QS]ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, [QE][QS]ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು. [QE]
6. [QS]ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. [QE][QS]ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು. [QE]
7. [PS]ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು. [PE]