1. {ಚೀಯೋನಿನ ಮುಂದಣ ಪ್ರಖ್ಯಾತಿ} [PS] ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ. [QBR]
2. ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು [QBR] ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. [QBR] ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. [QBR]
3. ಹೊರಟು ಬಂದ ಬಹು ಜನಾಂಗದವರು, [QBR] “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, [QBR] ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. [QBR] ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು. [QBR]
4. ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; [QBR] ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. [QBR] ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
5. {ಯೆಹೋವನ ನ್ಯಾಯನಿರ್ಣಯದ ದಿನ} [PS] ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ. [QBR]
6. ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, [QBR] ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, [QBR] ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ. [QBR]
7. ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. [QBR] ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ. [QBR]
8. ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. [QBR] ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ. [QBR]
9. ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ. [QBR]
10. ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, [QBR] ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ. [QBR]
11. ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. [QBR] ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. [QBR]
12. ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು [QBR] ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು. [QBR]
13. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ [QBR] ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, [QBR]
14. ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ, [QBR]
15. ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ, [QBR]
16. ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ [* ಮನೋಹರವಾದ ಪ್ರತಿಯೊಂದು ವಸ್ತುವಿನ ಅಥವಾ ಮನೋಹರವಾದ ಹಡಗು. ] ಮೇಲೆಯೂ ಆ ದಿನವೂ ತಪ್ಪದೇ ಬರುವುದು. [QBR]
17. ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. [QBR] ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. [QBR]
18. ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು. [QBR]
19. ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, [QBR] ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು. [QBR]
20. ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, [QBR] ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು. [QBR]
21. ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, [QBR] ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು. [QBR]
22. ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. [QBR] ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ. [PE]