1. {#1ಬಾಬೆಲಿನ ವಿಷಯವಾದ ದೈವೋಕ್ತಿ } [PS]ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. [PE][QS]ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ [QE][QS]ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ [QE]
2. [QS]ಘೋರದರ್ಶನವು ನನಗೆ ತಿಳಿಯ ಬಂದಿದೆ; [QE][QS]ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. [QE][QS]ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! [QE][QS]ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. [QE]
3. [QS]ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, [QE][QS]ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, [QE][QS]ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. [QE]
4. [QS]ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, [QE][QS]ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ. [QE]
5. [PS]ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; [PE][QS]ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ! [QE]
6. [QS]ಕರ್ತನು ನನಗೆ ಹೇಳುವುದೇನೆಂದರೆ, [QE][QS]“ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ. [QE]
7. [QS]ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, [QE][QS]ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, [QE][QS]ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ. [QE]
8. [QS]ಬಳಿಕ ಅವನು ಸಿಂಹದಂತೆ ಕೂಗಿ, [QE][QS]“ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, [QE][QS]ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. [QE]
9. [QS]ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” [QE][QS]ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! [QE][QS]ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು. [QE]
10. [PS]ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! [PE][QS]ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, [QE][QS]ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. [QE]
11. {#1ಎದೋಮಿನ ಬಗ್ಗೆ ದೈವೋಕ್ತಿ } [PS]ದೂಮದ[* ದೂಮದ ಇದು ಎದೋಮಿನ ಮತ್ತೊಂದು ಹೆಸರಾಗಿದೆ. ದೂಮ ಎಂದರೆ ಶಾಂತತೆ. ] ಬಗ್ಗೆ ದೈವೋಕ್ತಿ. [PE][PS]ಆತನು ಸೇಯೀರಿನಿಂದ [† ಸೇಯೀರಿನಿಂದ ಇದು ಸಹ ಎದೋಮಿನ ಮತ್ತೊಂದು ಹೆಸರಾಗಿದೆ. ಆದಿ 32:3. ] ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
12. ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು. [PE]
13. {#1ಅರಬಿಯ ಬಗ್ಗೆ ದೈವೋಕ್ತಿ } [QS]ಅರಬಿಯ ವಿಷಯವಾದ ದೈವೋಕ್ತಿ. [QE][QS]ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ. [QE]
14. [QS]ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, [QE][QS]ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ. [QE]
15. [QS]ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, [QE][QS]ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. [QE]
16. [PS]ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ[‡ ಕೇದಾರಿನ ಅರಬಿಯದಲ್ಲಿರುವ ಅಡವಿ ಪ್ರದೇಶ. ] ಸಕಲ ವೈಭವವು ಇಲ್ಲವಾಗುವುದು.
17. ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ. [PE]