1. {ಯೆರೂಸಲೇಮಿನ ಬಗ್ಗೆ ದೈವೋಕ್ತಿ} [PS] ದಿವ್ಯದರ್ಶನದ ಕಣಿವೆಯ [* ಕಣಿವೆಯ ಯೆರೂಸಲೇಮಿನ.] ವಿಷಯವಾದ ದೈವೋಕ್ತಿ. [QBR] ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು? [QBR]
2. ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; [QBR] ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ. [QBR]
3. ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; [QBR] ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ. [QBR]
4. ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, [QBR] ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ. [QBR]
5. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, [QBR] ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ. [QBR]
6. ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. [QBR] ಕೀರಿನವರು ಗುರಾಣಿಯನ್ನು ತೆಗೆದರು. [QBR]
7. ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, [QBR] ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.” [QBR]
8. ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. [QBR] ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ. [QBR]
9. ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; [QBR] ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. [QBR]
10. ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. [† ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. ಪಟ್ಟಣದ ಹೊರ ಮತ್ತು ಒಳ ಗೋಡೆಗಳ ನಡುವೆ ಕಳಪೆ ಸ್ಥಿತಿಯಲ್ಲಿದ್ದ ಮನೆಗಳನ್ನು ಅವರು ನೆಲಸಮ ಮಾಡಿದರು. ಪಟ್ಟಣದ ಹೊರ ಗೋಡೆಯ ದುರಸ್ತಿಗಾಗಿ ಮನೆಗಳನ್ನು ಕೆಡವಲಾಯಿತು.] [QBR]
11. ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; [QBR] ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ. [QBR]
12. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. [QBR] ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ. [QBR]
13. ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, [QBR] ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ. [QBR]
14. ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, [QBR] “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. [PS]
15. {ಶೆಬ್ನನ ಬಗ್ಗೆ ದೈವೋಕ್ತಿ} [PS] ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ, [QBR]
16. ‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? [QBR] ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’ ” [QBR]
17. ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು. [QBR]
18. ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; [QBR] ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು. [QBR]
19. ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು. [QBR]
20. ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು. [QBR]
21. ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; [QBR] ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು. [QBR]
22. ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; [QBR] ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು. [QBR]
23. ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. [QBR] ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು. [QBR]
24. ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, [QBR] ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ. [PE][PS]
25. ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ. [PE]